ADVERTISEMENT

ಸೌಮ್ಯಾ ರೆಡ್ಡಿ ವಿರುದ್ಧ ಎಫ್‌ಐಆರ್‌: ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 18:44 IST
Last Updated 27 ಜನವರಿ 2021, 18:44 IST
ಜಯನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್‌ ಕಾರ್ಯಕರ್ತರು –ಪ್ರಜಾವಾಣಿ ಚಿತ್ರ
ಜಯನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್‌ ಕಾರ್ಯಕರ್ತರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಜಯನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಜಯನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ‘ಸೌಮ್ಯಾ ರೆಡ್ಡಿ ವಿರುದ್ಧ ಬಿಜೆಪಿ ಮುಖಂಡರು ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ರೌಡಿ ಶಾಸಕಿ ಎಂದೂ ಕರೆದಿದ್ದಾರೆ. ಅವರು ಏನು ರೌಡಿ ಕೆಲಸ ಮಾಡಿದ್ದಾರೆ’ ಎಂದು ಪ್ರಶ್ನಿಸಿದರು.

ADVERTISEMENT

‘ಬಿಜೆಪಿಯೇ ಪೊಲೀಸರ ಮೂಲಕ ಹಲ್ಲೆ ಮಾಡಲು ಯತ್ನಿಸಿರುವ ಬಗ್ಗೆ ಹಲವರು ಹೇಳಿದ್ದಾರೆ. ನನ್ನ ದೂರಿಗೆ ಬೆಲೆಯೇ ಇಲ್ಲದಂತಾಗಿದೆ. ಸರ್ಕಾರಕ್ಕೆ ತಾಕತ್ತಿದ್ದರೆ ಬಿಜೆಪಿಯ ಬಿಬಿಎಂಪಿ ಮಾಜಿ ಸದಸ್ಯರು ನಡೆಸುತ್ತಿರುವ ವಸೂಲಿ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಲಿ’ ಎಂದು ಸೌಮ್ಯಾ ರೆಡ್ಡಿ ಸವಾಲು ಹಾಕಿದರು.

‘ನನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ಕುರಿತು ನಿಷ್ಠೆಯಿಂದ ತನಿಖೆ‌ ನಡೆಸಲಿ. ಯಾರದ್ದೋ ಒತ್ತಡಕ್ಕೆ ನನ್ನ ಮೇಲೆ ಸುಳ್ಳು ಆರೋಪ ಮಾಡುವುದು ಬೇಡ’ ಎಂದು‌ ಹೇಳಿದರು.

ಪ್ರತಿಭಟನೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್‌, ವಿಧಾನ ಪರಿಷತ್ತಿನ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ನಾರಾಯಣಸ್ವಾಮಿ, ಮುಖಂಡ ವಿ.ಎಸ್‌. ಉಗ್ರಪ್ಪಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.