ADVERTISEMENT

ದರ ಏರಿಕೆ ಖಂಡಿಸಿ ಭೂಪಸಂದ್ರದಲ್ಲಿ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2021, 19:11 IST
Last Updated 12 ಫೆಬ್ರುವರಿ 2021, 19:11 IST
ಪ್ರತಿಭಟನೆಯಲ್ಲಿ ಶಾಸಕ ಬೈರತಿ ಸುರೇಶ್, ಶಾಸಕ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ತಿನ ಸದಸ್ಯ ವಿಜಯ್ ಸಿಂಗ್, ಬಿಬಿಎಂಪಿ ಈ ಹಿಂದಿನ ಸದಸ್ಯರಾದ ಅಬ್ದುಲ್ ವಾಜೀದ್, ಆನಂದ್‌ಕುಮಾರ್ ಭಾಗವಹಿಸಿದ್ದರು
ಪ್ರತಿಭಟನೆಯಲ್ಲಿ ಶಾಸಕ ಬೈರತಿ ಸುರೇಶ್, ಶಾಸಕ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ತಿನ ಸದಸ್ಯ ವಿಜಯ್ ಸಿಂಗ್, ಬಿಬಿಎಂಪಿ ಈ ಹಿಂದಿನ ಸದಸ್ಯರಾದ ಅಬ್ದುಲ್ ವಾಜೀದ್, ಆನಂದ್‌ಕುಮಾರ್ ಭಾಗವಹಿಸಿದ್ದರು   

ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ ಖಂಡಿಸಿ ಹಾಗೂ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಂಜಯನಗರದ ಭೂಪಸಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪಾದಯಾತ್ರೆ ನಡೆಸಿದರು.

ಭೂಪಸಂದ್ರದಿಂದ ಹೊರಟು ನಾಗಶೆಟ್ಟಿಹಳ್ಳಿ, ಸಂಜಯನಗರ ಮೂಲಕ ಗೆದ್ದಲಹಳ್ಳಿಯವರೆಗೆ ಕಾಂಗ್ರೆಸ್‌ನ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಬಳಿಕ ಬೆಂಗಳೂರು ಉತ್ತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜನ ಸಾಮಾನ್ಯರ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿದರು.

ADVERTISEMENT

ಕೃಷಿ ಪ್ರಧಾನ ದೇಶದಲ್ಲಿ ರೈತರಿಗೆ ಮಾರಕವಾದ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಹೋರಾಟ ನಡೆಸುತ್ತಿರುವ ರೈತರನ್ನು ಕೇವಲವಾಗಿ ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಬೈರತಿ ಸುರೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಶಾಸಕ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ತಿನ ಸದಸ್ಯ ವಿಜಯ್ ಸಿಂಗ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಬಿಬಿಎಂಪಿ ಈ ಹಿಂದಿನ ಸದಸ್ಯರಾದ ಅಬ್ದುಲ್ ವಾಜೀದ್, ಆನಂದ್‌ಕುಮಾರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.