ADVERTISEMENT

ಪಂಜಿನ ಮೆರವಣಿಗೆ: ಯುವ ಕಾಂಗ್ರೆಸ್‌ ಕಾರ್ಯಕರ್ತರ ವಶ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 3:03 IST
Last Updated 27 ಮಾರ್ಚ್ 2023, 3:03 IST
ರಾಹುಲ್‌ ಗಾಂಧಿ ಅವರನ್ನು ಸಂಸತ್‌ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಭಾನುವಾರ ರಾತ್ರಿ ಯುವ ಕಾಂಗ್ರೆಸ್‌ ಘಟಕದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
ರಾಹುಲ್‌ ಗಾಂಧಿ ಅವರನ್ನು ಸಂಸತ್‌ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಭಾನುವಾರ ರಾತ್ರಿ ಯುವ ಕಾಂಗ್ರೆಸ್‌ ಘಟಕದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.   

ಬೆಂಗಳೂರು: ರಾಹುಲ್‌ ಗಾಂಧಿ ಅವರನ್ನು ಸಂಸತ್‌ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಭಾನುವಾರ ರಾತ್ರಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.

ರೇಸ್‌ ಕೋರ್ಸ್ ರಸ್ತೆಯ ಕಾಂಗ್ರೆಸ್‌ ಭವನದಿಂದ ಮೆರವಣಿಗೆ ಆರಂಭವಾಯಿತು. ಮಾರ್ಗ ಮಧ್ಯದಲ್ಲಿ ಪೊಲೀಸರು ಜಲಫಿರಂಗಿ ಬಳಸಿ ಚದುರಿಸಿ ವಶಕ್ಕೆ ಪಡೆದರು. ಬಳಿಕ, ಕಾರ್ಯಕರ್ತರನ್ನು ಬಿಡುಗಡೆ ಮಾಡಿದರು.

ಇದಕ್ಕೂ ಮೊದಲು ಪ್ರತಿಭಟನಕಾರರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.