ADVERTISEMENT

ಪ್ರಧಾನಿ ಮೋದಿಯಿಂದ ಸಿಬಿಐ ಸಂಸ್ಥೆ ದುರ್ಬಳಕೆ: ಕಾಂಗ್ರೆಸ್‌ ಆರೋಪ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2018, 6:41 IST
Last Updated 26 ಅಕ್ಟೋಬರ್ 2018, 6:41 IST
ಬೆಂಗಳೂರಿನ ಗಂಗಾನಗರದ ಸಿಬಿಐ ಕಚೇರಿ ಮುಂಭಾಗ ಶುಕ್ರವಾರ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. –ಪ್ರಜಾವಾಣಿ ಚಿತ್ರ
ಬೆಂಗಳೂರಿನ ಗಂಗಾನಗರದ ಸಿಬಿಐ ಕಚೇರಿ ಮುಂಭಾಗ ಶುಕ್ರವಾರ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. –ಪ್ರಜಾವಾಣಿ ಚಿತ್ರ   

ಬೆಂಗಳೂರು: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದ ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಅವರನ್ನು ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗಂಗಾನಗರದ ಸಿಬಿಐ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ಮಾಡಿದರು.

ಪ್ರಧಾನಿ ಮೋದಿ ಸಿಬಿಐ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಬೃಹತ್ ಹಗರಣ ನಡೆದಿದೆ‌‌. ಈ ಸಂಬಂಧ ತನಿಖೆ ಮಾಡಲು ಹೊರಟಿದ್ದಕ್ಕೆ ಅಲೋಕ್ ಅವರನ್ನು ರಾತ್ರೋರಾತ್ರಿ ಕೆಲಸದಿಂದ ತೆಗೆದುಹಾಕಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿದರು.

ಮೋದಿ ಒಬ್ಬ ಭ್ರಷ್ಟ ಪ್ರಧಾನಿ, ಅವರಿಗೆ ತೋಚಿದಂತೆ ಅಧಿಕಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಸಿಬಿಐ ನಿರ್ದೇಶಕರನ್ನು ಮರು ನಿಯುಕ್ತಿಗೊಳಿಸಬೇಕು ಎಂದು ಒತ್ತಾಯ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.