ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಲು ಯಾವ ವಿಷಯಗಳೂ ಇಲ್ಲದ ಕಾರಣ ಬಿಜೆಪಿ ಮುಖಂಡರು ಮುಡಾ ಪ್ರಕರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವೈಯಕ್ತಿಕ ತೇಜೋವಧೆ ಶುರು ಮಾಡಿದ್ದಾರೆ ಎಂದು ರಾಮಮನೋಹರ ಲೋಹಿಯಾ ಚಿಂತಕರ ಚಾವಡಿ ಅಧ್ಯಕ್ಷ ಬಿ.ಎಸ್. ಶಿವಣ್ಣ ಆರೋಪಿಸಿದ್ದಾರೆ.
‘ದೇವರಾಜು ಅರಸು ವಿರುದ್ಧವೂ ಹಿಂದೆ ಇಂಥದ್ದೇ ಆರೋಪ ಮಾಡಲಾಗಿತ್ತು. ಇದು ಪಾಳೆಗಾರಿಕೆ ಶಕ್ತಿಗಳ ಷಡ್ಯಂತ್ರ’ ಎಂದು ತಿಳಿಸಿದ್ದಾರೆ.
ಕಾನೂನಾತ್ಮಕವಾಗಿ ಮುಖ್ಯಮಂತ್ರಿಯವರ ಪತ್ನಿ ನಿವೇಶನ ಪಡೆದುಕೊಂಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಪ್ರೀಂಕೋರ್ಟ್ ತೀರ್ಪಿನಂತೆ ನಿವೇಶನ ಹಂಚಿಕೆ ಮಾಡಲಾಗಿದೆ. ತಾಂತ್ರಿಕವಾಗಿ ಎಲ್ಲ ನಿಯಮ ಪಾಲನೆ ಮಾಡಲಾಗಿದೆ. ಆದರೂ ಬಿಜೆಪಿಗೆ ಹಿಂದುಳಿದ ವರ್ಗಗಳ ಮೇಲೆ ಇರುವ ಅಸಹಿಷ್ಣುತೆಯ ಭಾಗವಾಗಿ ಮುಖ್ಯಮಂತ್ರಿ ವಿರುದ್ಧ ಮುಗಿಬಿದ್ದಿದ್ದಾರೆ ಎಂದು ದೂರಿದ್ದಾರೆ.
ಅಹಿಂದ ಸಮುದಾಯಗಳು ಬಿಜೆಪಿನಾಯಕರ ನಡವಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಅಹಿಂದ ವರ್ಗಗಳಿಗೆ ಶಕ್ತಿ ತುಂಬಿದ್ದ ಸಿದ್ದರಾಮಯ್ಯ ವಿರುದ್ಧದ ಪಿತೂರಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.