
ಪ್ರಜಾವಾಣಿ ವಾರ್ತೆ
ಬಂಧನ
ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೇಬಲ್‌ನನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರ್.ಟಿ.ನಗರ ಠಾಣೆಯ ಕಾನ್‌ಸ್ಟೇಬಲ್ ಯಮುನ ನಾಯಕ್ (32) ಬಂಧಿತ.
‘ಕೆಲ ದಿನಗಳ ಹಿಂದೆ ಸ್ವಾತಂತ್ರ್ಯ ಉದ್ಯಾನಕ್ಕೆ ಭದ್ರತೆಗೆ ನಿಯೋಜನೆಗೊಂಡಿದ್ದ ಕಾನ್‌ಸ್ಟೇಬಲ್, ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆರೋಪಿಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.