ADVERTISEMENT

ಬೆಂಗಳೂರು | ಕಾನ್‌ಸ್ಟೆಬಲ್ ಶವ ಪತ್ತೆ: ಆತ್ಮಹತ್ಯೆ ಶಂಕೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2025, 20:34 IST
Last Updated 17 ಮಾರ್ಚ್ 2025, 20:34 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ನಗರದ ಆಡುಗೋಡಿ ಪೊಲೀಸ್ ವಸತಿ ಗೃಹದಲ್ಲಿ ಸೋಮವಾರ ಕೊಳೆತ ಸ್ಥಿತಿಯಲ್ಲಿ ಕಾನ್‌ಸ್ಟೆಬಲ್‌ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ADVERTISEMENT

ನಗರ ಸಶಸ್ತ್ರ ಮೀಸಲು ಪಡೆಯಲ್ಲಿ (ಸಿಎಆರ್) ಕೆಲಸ ಮಾಡುತ್ತಿದ್ದ ಬೆಳಗಾವಿಯ ಮುಬಾರಕ್ ಮುಜಾವರ್ (29) ಎಂದು ಗುರುತಿಸಲಾಗಿದೆ. 

‘ವಸತಿ ಗೃಹದಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಸ್ಥಳೀಯರು ತಿಳಿಸಿದರು. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂತು. ಒಂದು ತಿಂಗಳ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆ ಇದ್ದು, ಶವ ಸಂಪೂರ್ಣ ಕೊಳೆತು ಹೋಗಿದೆ’ ಎಂದು ಹೇಳಿದ್ದಾರೆ.

‘ಮುಬಾರಕ್ ಅವರ ಪತ್ನಿ ಹೆರಿಗೆಗಾಗಿ ಅಥಣಿಗೆ ತೆರಳಿದ್ದು, ಅವರಿಗೂ ಮಾಹಿತಿ ನೀಡಲಾಗಿದೆ. ಅವರು ಬಂದ ಬಳಿಕ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದ್ದು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.