ADVERTISEMENT

ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿ: ಗೂಂಡಾ ಕಾಯ್ದೆಯಡಿ ರೌಡಿ ಅಕ್ರಮ್ ಬಂಧನ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2025, 14:34 IST
Last Updated 6 ಫೆಬ್ರುವರಿ 2025, 14:34 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ರೌಡಿಶೀಟರ್‌ ಅಕ್ರಮ್‌ ಖಾನ್ ಅಲಿಯಾಸ್ ಅಕ್ಕು ಎಂಬಾತನನ್ನು ಗೋವಿಂದಪುರ ಠಾಣೆ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

ADVERTISEMENT

‘2011ರಿಂದಲೂ ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಅಕ್ರಮ್ ಭಾಗಿಯಾಗಿದ್ದಾನೆ. ಕೊಲೆ ಪ್ರಯತ್ನ, ಹಲ್ಲೆ, ಸುಲಿಗೆ ಸೇರಿ 21 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

ಪ್ರಕರಣವೊಂದರಲ್ಲಿ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳಿಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಈತನ ವಿರುದ್ಧ ಎಂಟು ಜಾಮೀನು ರಹಿತ ವಾರಂಟ್‌ಗಳು ಜಾರಿಯಾಗಿವೆ. ಆರೋಪಿಯು ಪದೇ ಪದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಕಾರಣ ಬಂಧಿಸಿ, ಕಲಬುರಗಿ ಕೇಂದ್ರ ಕಾರಾಗೃಹದ ವಶಕ್ಕೆ ನೀಡಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.