ADVERTISEMENT

ಬೆಂಗಳೂರಿನಲ್ಲಿ 30ಕ್ಕೆ ಸಂವಿಧಾನ ನಡಿಗೆ

ಸಂವಿಧಾನವೇ ಬೆಳಕು: ಹೆಜ್ಜೆಯಿಡು ಬೆಂಗಳೂರು ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 15:40 IST
Last Updated 23 ಜನವರಿ 2026, 15:40 IST
ಐಎಲ್‌ಯು
ಐಎಲ್‌ಯು   

ಬೆಂಗಳೂರು: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ವತಿಯಿಂದ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಸಚಿವಾಲಯದ ಸಹಯೋಗ, ಬೆಂಗಳೂರು ವಿಶ್ವವಿದ್ಯಾಲಯದ ಸಹಕಾರದೊಂದಿಗೆ ಜ.30ರಂದು ಬೆಳಿಗ್ಗೆ 7ಕ್ಕೆ ‘ಸಂವಿಧಾನವೇ ಬೆಳಕು– ಹೆಜ್ಜೆಯಿಡು ಬೆಂಗಳೂರು’  ಸಂವಿಧಾನ ನಡಿಗೆ ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯ ವೆಂಕಟಗಿರಿ ಗೌಡ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.

ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಮೌಲ್ಯ, ಹಕ್ಕು, ಮತ್ತು ಕರ್ತವ್ಯಗಳನ್ನು ಗೌರವಿಸುವ, ಅರಿವು ಮೂಡಿಸುವ ಉದ್ದೇಶದಿಂದ ಸಂವಿಧಾನ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ವಿಶೇಷ ವಿಚಾರ ಸಂಕಿರಣದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ನಂತರ ನಡಿಗೆಗೆ ಚಾಲನೆ ನೀಡಲಾಗುತ್ತದೆ. ಪ್ರವೇಶ ಉಚಿತವಾಗಿದ್ದು, ನೋಂದಣಿ ಕಡ್ಡಾಯವಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿರುವ ಎಲ್ಲ ಕಾಲೇಜುಗಳ ಪದವಿ ವಿದ್ಯಾರ್ಥಿಗಳು ಭಾಗವಹಿಸಲು ಮುಕ್ತ ಅವಕಾಶ ಇದೆ. ನೋಂದಣಿ ಮಾಡಿಕೊಂಡವರಿಗೆ ಟಿ ಶರ್ಟ್‌ ಮತ್ತು ಕ್ಯಾಪ್‌ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಮಾಹಿತಿಗೆ 9901918805 ಸಂಪರ್ಕಿಸಬಹುದು.

ADVERTISEMENT
ಕ್ಯೂಆರ್‌ ಕೋಡ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.