
ಬೆಂಗಳೂರು: ಸಾಂವಿಧಾನಿಕ ಆಡಳಿತವು ಭಾರತದ ಪ್ರಜಾಪ್ರಭುತ್ವ ಚೌಕಟ್ಟಿನ ಮೂಲಾಧಾರ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಹೇಳಿದರು.
ಸಿಎಂಆರ್ ವಿಶ್ವವಿದ್ಯಾಲಯ ಆಯೋಜಿಸಿದ್ದ ‘ಭಾರತೀಯ ದೃಷ್ಟಿಕೋನದಲ್ಲಿ ಸಾಂವಿಧಾನಿಕ ಆಡಳಿತ ಮತ್ತು ಸಾರ್ವಜನಿಕ ನೀತಿ’ ಬಗ್ಗೆ ಕೆ.ಸಿ. ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತದಲ್ಲಿ ಆಡಳಿತವು ರಾಜಪ್ರಭುತ್ವ ಮತ್ತು ರಾಜಕೀಯ ಅಧಿಕಾರದಿಂದ ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸುವ ಆಧುನಿಕ ಸಾಂವಿಧಾನಿಕ ವ್ಯವಸ್ಥೆಯಾಗಿ ವಿಕಸನಗೊಂಡಿದೆ ಎಂದು ವಿವರಿಸಿದರು.
ಸಿಎಂಆರ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಮತ್ತು ಸಿಎಂಆರ್ ವಿಶ್ವವಿದ್ಯಾಲಯದ ಅಧ್ಯಕ್ಷ ಕೆ.ಸಿ. ರಾಮಮೂರ್ತಿ, ಸಿಎಂಆರ್ ವಿಶ್ವವಿದ್ಯಾಲಯದ ಕುಲಪತಿ ಸಬಿತಾ ರಾಮಮೂರ್ತಿ, ಸಿಎಂಆರ್ ಜ್ಞಾನಧಾರ ಟ್ರಸ್ಟ್ ಕಾರ್ಯದರ್ಶಿ ಕೆ.ಸಿ. ಜಗನ್ನಾಥ ರೆಡ್ಡಿ, ಕುಲಪತಿ ಎಚ್.ಬಿ. ರಾಘವೇಂದ್ರ, ಸಹ ಕುಲಪತಿ ಪ್ರವೀಣ್ ಆರ್, ಕುಲಸಚಿವ ಮೋಹನ್ ಬಾಬು ಜಿ.ಎನ್. ಎಒಎಲ್‌ಎಸ್ ನಿರ್ದೇಶಕ ಪ್ರಾಣೇಶ್ವರನ್, ಕರ್ನಾಟಕ ಕಾನೂನು ಆಯೋಗದ ಸದಸ್ಯ ನ್ಯಾಯಮೂರ್ತಿ ಅಶೋಕ್ ನಿಜಗಣ್ಣವರ್ ಇದ್ದರು.
ಕಾನೂನು ಅಧ್ಯಯನ ಶಾಲೆಯ ಡೀನ್ ಡಾ. ಟಿ.ಆರ್. ಸುಬ್ರಹ್ಮಣ್ಯ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರಾಜ್‌ಕುಮಾರ್ ಖತ್ರಿ ಅಧ್ಯಕ್ಷತೆ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.