ADVERTISEMENT

₹23 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 21:18 IST
Last Updated 12 ಜೂನ್ 2020, 21:18 IST
ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಸ್ಥಳೀಯ ನಿವಾಸಿಗಳು ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರಿಗೆ ಮನವಿ ಮಾಡಿದರು. ಬಿಬಿಎಂಪಿ ಸದಸ್ಯ ಎಂ.ಸತೀಶ್ ಇತರರು ಇದ್ದರು.
ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಸ್ಥಳೀಯ ನಿವಾಸಿಗಳು ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರಿಗೆ ಮನವಿ ಮಾಡಿದರು. ಬಿಬಿಎಂಪಿ ಸದಸ್ಯ ಎಂ.ಸತೀಶ್ ಇತರರು ಇದ್ದರು.   

ಯಲಹಂಕ: ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನೂ ಮೂರು ಮೇಲ್ಸೇತುವೆ ಕಾಮಗಾರಿಗಳು ಶೀಘ್ರದಲ್ಲೇ ಆರಂಭವಾಗಲಿವೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.

ಉಪನಗರ ವಾರ್ಡ್‌ ವ್ಯಾಪ್ತಿಯ ಬಡಾವಣೆಗಳಲ್ಲಿ 2019-20ನೇ ಸಾಲಿನ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿಯಲ್ಲಿ ₹23 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಯಲಹಂಕ ಠಾಣೆ ವೃತ್ತದಿಂದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ವರೆಗೆ ಮತ್ತು ಸಂತೆವೃತ್ತದ ಮಾರ್ಗವಾಗಿ ಕೋಗಿಲು ವೃತ್ತದವರೆಗೆ ಹಾಗೂ ಎಂ.ಎಸ್.ಪಾಳ್ಯದಲ್ಲಿ ಮೇಲ್ಸೇತುವೆ ಕಾಮಗಾರಿಗಳು ಸದ್ಯದಲ್ಲೇ ಆರಂಭವಾಗಲಿವೆ ಎಂದರು.

ADVERTISEMENT

ಬಿಬಿಎಂಪಿ ಸದಸ್ಯ ಎಂ.ಸತೀಶ್, ಮಾಜಿ ಸದಸ್ಯ ಎಂ.ಮುನಿರಾಜು, ಮುಖಂಡ ವೈ.ಜಿ.ವಸಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.