ADVERTISEMENT

ತಂಬಾಕು ಸೇವನೆಯಿಂದ ಬದುಕು ಹಾಳು: ಡಾ.ಶೆಟ್ಟಿ

ಕ್ಯಾನ್ಸರ್ ತಜ್ಞ ಡಾ. ವಿವೇಕ್ ಶೆಟ್ಟಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2019, 20:00 IST
Last Updated 18 ಸೆಪ್ಟೆಂಬರ್ 2019, 20:00 IST
ಕಾರ್ಯಾಗಾರದಲ್ಲಿ ‘ಸಂಬಂಧ್’ ಹೆಲ್ತ್ ಫೌಂಡೇಷನ್ ಮುಖ್ಯಸ್ಥ ಸಂಜಯ್ ಸೇಠ್, ಡಾ.ವಿವೇಕ್ ಶೆಟ್ಟಿ, ಪ್ರೊ.ಕೆ.ಆರ್. ವೇಣುಗೋಪಾಲ್ ಹಾಗೂ ಸತೀಶ್ ಗೌಡ ಇದ್ದರು.
ಕಾರ್ಯಾಗಾರದಲ್ಲಿ ‘ಸಂಬಂಧ್’ ಹೆಲ್ತ್ ಫೌಂಡೇಷನ್ ಮುಖ್ಯಸ್ಥ ಸಂಜಯ್ ಸೇಠ್, ಡಾ.ವಿವೇಕ್ ಶೆಟ್ಟಿ, ಪ್ರೊ.ಕೆ.ಆರ್. ವೇಣುಗೋಪಾಲ್ ಹಾಗೂ ಸತೀಶ್ ಗೌಡ ಇದ್ದರು.   

ಬೆಂಗಳೂರು: ‘ತಂಬಾಕು ಉತ್ಪನ್ನಗಳನ್ನು ನಿರಂತರವಾಗಿ ಸೇವಿಸುವುದರಿಂದ ವ್ಯಕ್ತಿಯು ಕ್ಯಾನ್ಸರ್‌ನಂತಹ ಕಾಯಿಲೆಗಳಿಗೆ ತುತ್ತಾಗಿ, ತನ್ನ ಬದುಕನ್ನೇ ಹಾಳು ಮಾಡಿಕೊಳ್ಳಬೇಕಾಗುತ್ತದೆ’ ಎಂದುಕ್ಯಾನ್ಸರ್ ತಜ್ಞ ಡಾ. ವಿವೇಕ್ ಶೆಟ್ಟಿ ಎಚ್ಚರಿಸಿದರು.

ರಾಜ್ಯ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿಬೆಂಗಳೂರು ವಿಶ್ವವಿದ್ಯಾಲಯ ನಗರದಲ್ಲಿ ಬುಧವಾರ ಆಯೋಜಿಸಿದ್ದ ತಂಬಾಕು ನಿಯಂತ್ರಣ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ತಂಬಾಕು ಉತ್ಪನ್ನಗಳನ್ನು ಸೇವಿಸುವುದರಿಂದ ಕ್ಯಾನ್ಸರ್ ಜತೆಗೆ ಶ್ವಾಸಕೋಶ ಹಾಗೂ ಹೃದಯ ಸಂಬಂಧಿ ರೋಗಗಳು ಬರುವ ಸಾಧ್ಯತೆಗಳು ಹೆಚ್ಚಿರುತ್ತವೆ. ಇಂತಹ ಗಂಭೀರ ಕಾಯಿಲೆಗಳಿಗೆ ಯುವ ಜನತೆಯೇ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಇದರಿಂದ ದೇಶಕ್ಕೆ ಕೂಡಾ ನಷ್ಟವಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್, ‘ತಂಬಾಕು ಉತ್ಪನ್ನಗಳ ತಯಾರಿಕೆಗೆ ಅವಕಾಶ ನೀಡಿ, ಅದನ್ನು ಬಳಸಬೇಡಿ ಎಂದು ಜನರಲ್ಲಿ ಅರಿವು ಮೂಡಿಸುವುದು ಸಮಂಜಸವಲ್ಲ. ಕಾನೂನಿನ ಮೂಲಕ ತಂಬಾಕು ಉತ್ಪನ್ನಗಳನ್ನು ನಿಷೇಧಿಸಬೇಕು’ ಎಂದು ಆಗ್ರಹಿಸಿದರು.

ತಂಬಾಕು ಸೇವನೆಯಿಂದ ಕ್ಯಾನ್ಸರ್‌ಗೆ ಒಳಗಾದವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.ತಂಬಾಕು ಹಾಗೂ ಸಂಬಂಧಿತ ಇತರೆ ಉತ್ಪನ್ನಗಳನ್ನು ಬಳಸುವುದಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.