ADVERTISEMENT

ಟಿ.ವಿ ನಿಯಂತ್ರಣ: ಪ್ರಮಾಣಪತ್ರ ಸಲ್ಲಿಕೆಗೆ ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 25 ಜೂನ್ 2019, 19:57 IST
Last Updated 25 ಜೂನ್ 2019, 19:57 IST
   

ಬೆಂಗಳೂರು: ‘ಟಿ.ವಿ ವಾಹಿನಿ ಕಾರ್ಯಕ್ರಮಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿ’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶಿಸಿದೆ.

‘ಸರ್ಕಾರ ಮೇಲ್ವಿಚಾರಣಾ ಸಮಿತಿ ರಚಿಸಿಲ್ಲ’ ಎಂದು ಆಕ್ಷೇಪಿಸಿ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌. ಓಕಾ ಹಾಗೂ ನ್ಯಾಯಮೂರ್ತಿ ಎಚ್‌.ಟಿ.ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಆಕ್ಷೇಪ ಏನು?: ‘ಖಾಸಗಿ ಟಿ.ವಿ.ವಾಹಿನಿ ಕಾರ್ಯಕ್ರಮಗಳನ್ನು ನಿಯಂತ್ರಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಬೇಕು ಎಂದು 2018ರ ಫೆಬ್ರುವರಿ 19 ರಂದು ಕೇಂದ್ರ ಸರ್ಕಾರ ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ ರೆಗ್ಯೂಲೇಷನ್ಸ್ ಕಾಯ್ದೆ-1995ರ ಅಡಿಯಲ್ಲಿ ಎಲ್ಲ ರಾಜ್ಯಗಳಿಗೆ ನಿರ್ದೇಶಿಸಿದೆ. ಆದರೆ, ರಾಜ್ಯದಲ್ಲಿ ಈ ಸಮಿತಿ ರಚನೆ ಮಾಡಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.

ADVERTISEMENT

ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಲಾಗಿದೆ. ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.