ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಅವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಅಡಿ ಬಾಂಗ್ಲಾದೇಶದ ಪತ್ರಕರ್ತ ಸೇರಿ ಇಬ್ಬರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೆಪಿಎಸ್‌ಸಿಯ ಕಾನೂನು ಘಟಕದ ವಕೀಲ ಜಿ.ಶ್ರೀನಿವಾಸ್ ಎಂಬುವವರು ನೀಡಿದ ದೂರಿನ ಮೇರೆಗೆ ಬಾಂಗ್ಲಾದೇಶದ ಪರ್ತಕರ್ತ ಸಲಾವುದ್ದೀನ್ ಶೋಯೇಬ್ ಚೌಧರಿ ಮತ್ತು ಅದಿತಿ ಘೋಷ್ ಅವರ ವಿರುದ್ಧ ಹೈಗ್ರೌಂಡ್ಸ್ ಠಾಣೆ ಪೊಲೀಸರು, ಕೋಮುದ್ವೇಷ ಬಿತ್ತುವುದು, ಅಪ ಪ್ರಚಾರ, ಧರ್ಮಗಳ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಡಿ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.