ADVERTISEMENT

ಸುಗಮ ಸಂಚಾರ: 26,351 ಆಂಬುಲೆನ್ಸ್​ಗೆ ಅನುಕೂಲ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 20:05 IST
Last Updated 8 ಫೆಬ್ರುವರಿ 2020, 20:05 IST
ಆ್ಯಂಬುಲೆನ್ಸ್
ಆ್ಯಂಬುಲೆನ್ಸ್   

ಬೆಂಗಳೂರು: ನಗರದಲ್ಲಿ ಹೆಚ್ಚಿರುವ ವಾಹನಗಳ ದಟ್ಟಣೆ ನಡುವೆಯೂ ಜನವರಿಯಲ್ಲಿ 26,351 ಆಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಪೊಲೀಸರು ಅನುಕೂಲ ಮಾಡಿಕೊಟ್ಟಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಬಿ.ಆರ್. ರವಿಕಾಂತೇಗೌಡ, ‘ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಆಂಬುಲೆನ್ಸ್‌ಗಳ ಸಂಚಾರಕ್ಕೆ ವಿಶೇಷ ಒತ್ತು ನೀಡಲಾಗಿದೆ’ ಎಂದಿದ್ದಾರೆ.

‘ನಗರ ಬೆಳೆದಂತೆ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಪ್ರಮುಖ ರಸ್ತೆಗಳಲ್ಲಿ ವಿಪರೀತ ದಟ್ಟಣೆಯೂ ಆಗುತ್ತಿದೆ. ಎಲ್ಲ ವಾಹನಗಳ ಸಂಚಾರಕ್ಕೂ ಅನುಕೂಲ ಮಾಡಿಕೊಡುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

ADVERTISEMENT

‘ರಸ್ತೆಯಲ್ಲಿ ಆಂಬುಲೆನ್ಸ್‌ಗಳು ಕಂಡ ಕೂಡಲೇ ಪೊಲೀಸರು ತ್ವರಿತವಾಗಿ ದಾರಿ ಮಾಡಿಕೊಡುತ್ತಿದ್ದಾರೆ. ರೋಗಿಗಳನ್ನು ತುರ್ತಾಗಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಸಿಗುವಂತೆ ಮಾಡಿ, ಪ್ರಾಣವನ್ನೂ ರಕ್ಷಿಸುತ್ತಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.