ADVERTISEMENT

ಕೊರೊನಾ: ಒಗ್ಗೂಡಿ ಕಾರ್ಯನಿರ್ವಹಿಸಲು ಸೂಚನೆ

ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ * ರಾತ್ರಿ ಕರ್ಫ್ಯೂ ಬಗ್ಗೆ ತಿಳಿವಳಿಕೆ ಮೂಡಿಸಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 21:40 IST
Last Updated 1 ಜುಲೈ 2020, 21:40 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಂಟೈನ್‌ಮೆಂಟ್‌ (ನಿಯಂತ್ರಿತ) ಪ್ರದೇಶಗಳ ಸಂಖ್ಯೆಯಲ್ಲೂ ಏರಿಕೆ ಕಂಡುಬರುತ್ತಿದೆ. ಇಂಥ ಪ್ರದೇಶಗಳಲ್ಲಿ ಬಿಬಿಎಂಪಿ ಹಾಗೂ ಪೊಲೀಸರು ಜಂಟಿಯಾಗಿ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ನಗರದಲ್ಲಿ ಬುಧವಾರ ತುರ್ತು ಸಭೆ ನಡೆಸಿದ ಬೊಮ್ಮಾಯಿ, ಕೊರೊನಾ ಸೋಂಕು ಪ್ರಕರಣಗಳು ಹಾಗೂ ಕಂಟೈನ್‌ಮೆಂಟ್‌ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ಹಾಗೂ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾಹಿತಿ ಹಂಚಿಕೊಂಡರು.

‘ಕಂಟೈನ್‌ಮೆಂಟ್‌ ಪ್ರದೇಶಗಳು ಹೆಚ್ಚಾದಂತೆ ಬಿಬಿಎಂಪಿ ಸಿಬ್ಬಂದಿ ಮೇಲಿನ ಕೆಲಸದ ಒತ್ತಡವೂ ಜಾಸ್ತಿ ಆಗುತ್ತಿದೆ. ಸದ್ಯ ಪೊಲೀಸರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪೊಲೀಸರು ನಮ್ಮೊಂದಿಗೆ ಕೆಲಸಕ್ಕೆ ಕೈಜೋಡಿಸಬೇಕು’ ಎಂದು ಆಯುಕ್ತ ಅನಿಲ್‌ಕುಮಾರ್ ವಿನಂತಿಸಿದರು.

ADVERTISEMENT

ಭಾಸ್ಕರ್ ರಾವ್ ಅವರಿಗೆ ಸೂಚನೆ ನೀಡಿದ ಬೊಮ್ಮಾಯಿ, ‘ಬಿಬಿಎಂಪಿ ಸಿಬ್ಬಂದಿಗೆ ಅಗತ್ಯವಾದ ಎಲ್ಲ ಸಹಕಾರ ನೀಡಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.