ADVERTISEMENT

ಬೆಂಗಳೂರು: ಕೊರೊನಾ ವಾರ್ಡ್‌ನಲ್ಲೇ ವೃದ್ಧೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 16:54 IST
Last Updated 26 ಜೂನ್ 2020, 16:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೊರೊನಾ ಸೋಂಕು ತಗುಲಿದ್ದರಿಂದಾಗಿ ಕೆ.ಸಿ.ಜನರಲ್ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೊಬ್ಬರು, ವಾರ್ಡ್‌ನಲ್ಲೇ ಶುಕ್ರವಾರ ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಣಿಗಲ್‌ನವರಾದ 60 ವರ್ಷದ ವೃದ್ಧೆ, ರಾಜಗೋಪಾಲನಗರದಲ್ಲಿ ವಾಸವಿದ್ದರು. ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಇತ್ತೀಚೆಗೆ ಗಂಟಲಿನ ದ್ರವದ ಪರೀಕ್ಷೆ ಮಾಡಿದಾಗ ಕೊರೊನಾ ಸೋಂಕು ದೃಢಪಟ್ಟಿತ್ತು.

‘ಕೊರೊನಾ ಸೋಂಕಿತರಿಗೆ ಮೀಸಲಿಟ್ಟ ವಿಶೇಷ ವಾರ್ಡ್‌ನಲ್ಲಿ ವೃದ್ಧೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಂಕು ತಗುಲಿದ್ದರಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾದ ವೃದ್ಧೆ, ವಾರ್ಡ್‌ನ ಶೌಚಾಲಯದಲ್ಲೇ ಸೀರೆಯಿಂದ ನೇಣು ಹಾಕಿಕೊಂಡು ಶುಕ್ರವಾರ ನಸುಕಿನ 2 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಮಲ್ಲೇಶ್ವರ ಪೊಲೀಸರು ಹೇಳಿದರು.

ADVERTISEMENT

ಕುಟುಂಬದ ನಾಲ್ವರಿಗೂ ಸೋಂಕು; ವೃದ್ಧೆಯೊಂದಿಗೆ ಅವರ ಮನೆಯ ನಾಲ್ವರು ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲೂ ಕೊರೊನಾ ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.