ADVERTISEMENT

ಆಸ್ಪತ್ರೆಯಲ್ಲಿದ್ದ ಕೊರೊನಾ ಸೋಂಕಿತ ಪರಾರಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 21:28 IST
Last Updated 10 ಜುಲೈ 2020, 21:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಹೊಸಕೋಟೆ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಕೊರೊನಾ ಸೋಂಕಿತರೊಬ್ಬರು ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಸೋಂಕಿತ, ಬೆಂಗಳೂರಿನಲ್ಲಿ ವಾಸವಿದ್ದರು. ಇತ್ತೀಚೆಗಷ್ಟೇ ಅವರಿಗೆ ಸೋಂಕು ತಗುಲಿದ್ದು ದೃಢಪಟ್ಟಿತ್ತು. ಅವರನ್ನು ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಸಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದರು.

ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ಸೋಂಕಿತ ಚಿಕಿತ್ಸೆ ಪಡೆಯುತ್ತಿದ್ದರು. ತಮ್ಮನ್ನು ಮನೆಗೆ ಕಳುಹಿಸುವಂತೆ ಹಲವು ಬಾರಿ ಆಸ್ಪತ್ರೆ ಸಿಬ್ಬಂದಿ ಜೊತೆ ಜಗಳ ಮಾಡಿದ್ದರು.

ADVERTISEMENT

ಶುಕ್ರವಾರ ಬೆಳಿಗ್ಗೆ ವಾರ್ಡ್‌ನಿಂದ ಅವರು ಪರಾರಿಯಾಗಿದ್ದು, ಈ ಸಂಬಂಧ ಆಸ್ಪತ್ರೆಯ ಸಿಬ್ಬಂದಿ ಹೊಸಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.