ADVERTISEMENT

ಪೊಲೀಸರ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಕೈಪಿಡಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 16:17 IST
Last Updated 7 ಆಗಸ್ಟ್ 2020, 16:17 IST

ಬೆಂಗಳೂರು: ಪೊಲೀಸರ ಆರೋಗ್ಯ ರಕ್ಷಣೆಗಾಗಿ ಮಾರ್ಗಸೂಚಿ ಕೈಪಿಡಿ ಬಿಡುಗಡೆ ಮಾಡಲಾಗಿದೆ.

ನಗರದ ಹಲವು ಪೊಲೀಸರು ಕೊರೊನಾ ಸೋಂಕಿತರಾಗಿದ್ದರು.ಹೀಗಾಗಿ, ಪೊಲೀಸರು ಆರೋಗ್ಯದ ಬಗ್ಗೆ ಕಾಳಜಿ ವಹಿಸಲೆಂದು ಈ ಕೈಪಿಡಿ ಸಿದ್ಧಪಡಿಸಲಾಗಿದೆ. ಇದರಲ್ಲಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್‌ ಸೂಚನೆ ನೀಡಿದ್ದಾರೆ.

‘ಠಾಣೆಯಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಆಗಾಗ ಕೈ ತೊಳೆಯಬೇಕು, ಹೊರಗಡೆ ಕರ್ತವ್ಯನಿರತ ಸಿಬ್ಬಂದಿ ನೇರವಾಗಿ ಮನೆಗೆ ಹೋಗಬೇಕು, ಸಂಬಂಧಿಕರು–ಸ್ನೇಹಿತರನ್ನು ಭೇಟಿಯಾಗಲು ಹೋಗಬಾರದು. ವ್ಯಾಯಾಮ ಮಾಡಬೇಕು’ ಎಂಬ ಅಂಶಗಳು ಮಾರ್ಗಸೂಚಿಯಲ್ಲಿವೆ.

ADVERTISEMENT

‘ಡಿಸಿಪಿ‌- ಎಸಿಪಿ ಕಚೇರಿ ಹಾಗೂ ಪ್ರತಿ ಠಾಣೆಯಲ್ಲೂ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸ್ ವ್ಯವಸ್ಥೆ ಇರಬೇಕು. ಹೊಯ್ಸಳ ವಾಹನ ಸಿಬ್ಬಂದಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಸ್ತು ತಿರುಗಬೇಕು’ ಎಂದೂ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.