ADVERTISEMENT

ಬೆಂಗಳೂರು: ಕೋವಿಡ್‌ಗೆ ಮತ್ತೊಬ್ಬ ಎಎಸ್ಐ ಸಾವು

​ಪ್ರಜಾವಾಣಿ ವಾರ್ತೆ
Published 21 ಜೂನ್ 2020, 8:29 IST
Last Updated 21 ಜೂನ್ 2020, 8:29 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಕೊರೊನಾ ಸೋಂಕು ತಗುಲಿದ್ದ ವಿಲ್ಸನ್ ಗಾರ್ಡನ್ ಸಂಚಾರ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ರೊಬ್ಬರು (ಎಎಸ್ಐ) ಭಾನುವಾರ ಬೆಳಿಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

59 ವರ್ಷದ ಎಎಸ್ಐ ಅವರನ್ನು ಇತ್ತೀಚೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದ್ದಾರೆ. ಈ ಮಾಹಿತಿಯನ್ನು ಬಿಬಿಎಂಪಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಸಾವನ್ನಪ್ಪಿದ್ದ ವಿ.ವಿ.ಪುರ ಸಂಚಾರ ಠಾಣೆ ಎಎಸ್ಐ ಅವರಿಗೂ ಕೊರೊನಾ ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿತ್ತು. ಇದೀಗ ವಿಲ್ಸನ್ ಗಾರ್ಡನ್ ಸಂಚಾರ ಠಾಣೆ ಎಎಸ್ಐ ಸಹ ಅಸುನೀಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.