ADVERTISEMENT

ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ ಕೊರೊನಾ ಪಾಸಿಟಿವ್

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2021, 10:46 IST
Last Updated 27 ಮಾರ್ಚ್ 2021, 10:46 IST
ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ
ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ   

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರ ಪುತ್ರಿ, ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ತಮ್ಮ ಟ್ವಿಟರ್ ಖಾತೆಯಲ್ಲಿ, ‘ನನಗೆ ಕೋವಿಡ್ ಸೋಂಕು ತಗುಲಿದೆ. ರೋಗ ಲಕ್ಷಣಗಳು ಹೆಚ್ಚಿಲ್ಲದೇ ಇದ್ದರೂ ಈ ಹಿಂದೆ ನನಗೆ ಅಸ್ತಮಾ ಇದ್ದ ಕಾರಣ ಪೋಷಕರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಸೌಮ್ಯಾ ರೆಡ್ಡಿ ಬರೆದುಕೊಂಡಿದ್ದಾರೆ.

‘ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳಿದ್ದರೆ ನನ್ನ ಕಚೇರಿಗೆ ಕರೆ ಮಾಡಬೇಕಾಗಿ ಕೋರುತ್ತೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆಗೆ ಒಳಗಾಗಬೇಕು’ ಎಂದೂ ಮನವಿ ಮಾಡಿದ್ದಾರೆ.

ADVERTISEMENT

‘ಕೋವಿಡ್ ಎರಡನೇ ಅಲೆಯ ತೀವ್ರತೆ ಹೆಚ್ಚುತ್ತಿದೆ. ಪ್ರತಿಯೊಬ್ಬರೂ ಮುಂಜಾಗ್ರತೆ ಕ್ರಮ ಕೈಗೊಂಡು ಮಾಸ್ಕ್ ಧರಿಸಿ ಎಂದು ಸಲಹೆ ನೀಡಿದ್ದು, ಸರ್ಕಾರ ಎಲ್ಲರಿಗೂ ಲಸಿಕೆ ನೀಡುವ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.