ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೈಕೋರ್ಟ್‌ನಲ್ಲಿ ಬಯೋಮೆಟ್ರಿಕ್ ಹಾಜರಾತಿ ಬಳಕೆಗೆ ವಿನಾಯಿತಿ ನೀಡಲಾಗಿದೆ.
ಹೈಕೋರ್ಟ್ ಪ್ರಧಾನ ಪೀಠ ಇರುವ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಸಂಚಾರಿ ಪೀಠಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಬಯೋಮೆಟ್ರಿಕ್ ಬದಲು ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ್ ಬುಧವಾರ ಸುತ್ತೋಲೆ ಹೊರಡಿಸಿದ್ದಾರೆ.
ಮತ್ತೆ ಸೂಚನೆ ನೀಡುವ ತನಕ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕುವುದನ್ನೇ ಮುಂದುವರಿಸಬೇಕು. ಮುಖ್ಯ ನ್ಯಾಯಮೂರ್ತಿ ಸೂಚನೆ
ಮೇರೆಗೆ ಈ ಸುತ್ತೋಲೆ ಹೊರಡಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.