ಕೊರೊನಾ ವೈರಸ್ ಲಾಕ್‌ಡೌನ್: ಬೆಂಗಳೂರು - ಮೈಸೂರು ರಿಂಗ್ ರಸ್ತೆಯಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗಲು ಮತ್ತು ಮೈಸೂರು ಕಡೆಯಿಂದ ಬೆಂಗಳೂರು ಬರುವವರನ್ನು ತಪಾಸಣೆ ಮಾಡಲಾಗುತ್ತಿದೆ. ಕೆಂಗೇರಿಯಲ್ಲಿಯೂ ಬೆಂಗಳೂರಿಗೆ ಬರುವವರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅನಾರೋಗ್ಯದಿಂದ ಕೂಡಿರುವವರು, ತರಕಾರಿ, ಹೂ ಸಾಗಣೆ ಮಾಡುವವರನ್ನು ಮಾತ್ರ ಒಳಬಿಡಲಾಗುತ್ತಿದೆ. ಇನ್ನುಳಿದಂತೆ ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಅವಶ್ಯವಿದ್ದವರನ್ನು ಬಿಡಲಾಗುತ್ತಿದೆ. ಉಳಿದವರನ್ನು ವಾಪಸ್ ಕಳಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.