ADVERTISEMENT

ಕೋವಿಡ್: ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ

ಬಹುತೇಕರಿಗೆ ಸೌಮ್ಯ ಸ್ವರೂಪದ ಲಕ್ಷಣಗಳು

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 2:31 IST
Last Updated 3 ಜನವರಿ 2022, 2:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ನಗರದಲ್ಲಿ ಸದ್ಯ ಕೇವಲ ಎರಡು ಸರ್ಕಾರಿ ಆಸ್ಪತ್ರೆಗಳು ಮಾತ್ರ ಕೋವಿಡ್‌–19 ರೋಗಿಗಳನ್ನು ದಾಖಲಿಸಿಕೊಳ್ಳುತ್ತಿರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಸಂಖ್ಯೆ ಕ್ರಮೇಣ ಹೆಚ್ಚಾಗುತ್ತಿದೆ.

ಆದರೆ, ಬಹುತೇಕರಲ್ಲಿ ಸೌಮ್ಯ ಸ್ವರೂಪದ ಲಕ್ಷಣಗಳಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಬಿಬಿಎಂಪಿ ವತಿಯಿಂದ ಕಲ್ಪಿಸಲಾಗುವ ಸರ್ಕಾರಿ ಕೋಟಾ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಪ್ರತಿ ದಿನ 26ಕ್ಕೂ ಹೆಚ್ಚು ಮಂದಿ ಈ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ.

ADVERTISEMENT

‘ರೋಗಿಗಳು ವೆಂಟಿಲೇಟರ್‌ ರಹಿತ ಹಾಸಿಗೆಗಳಿಗೆ ದಾಖಲಾಗುತ್ತಿದ್ದಾರೆ. ಅದರಲ್ಲೂ 45 ವಯಸ್ಸಿನ ಮೇಲಿನವರೇ ಹೆಚ್ಚಿನ ಸಂಖ್ಯೆ
ಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದಾರೆ’ ಎಂದು ಬೌರಿಂಗ್‌, ಲೇಡಿ ಕರ್ಜನ್‌ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೋ
ಡಲ್‌ ಅಧಿಕಾರಿ ಡಾ.ಎಚ್‌.ಎಂ. ಶ್ರೀಕಾಂತ್‌ ಹೆಳವಾರ್‌ ತಿಳಿಸಿದ್ದಾರೆ.

ಕಳೆದ 14 ದಿನಗಳಲ್ಲಿ 296 ಮಂದಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೆ, ಕೇವಲ 38 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಬಿಬಿಎಂಪಿ ಅಂಕಿ–ಸಂಖ್ಯೆಗಳಿಂದ ತಿಳಿದು ಬಂದಿದೆ.

ಮಕ್ಕಳಿಗೆ ಲಸಿಕೆ: 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಅಭಿಯಾನಕ್ಕೆ ಬಿಬಿಎಂಪಿ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ.

ಈ ವಯೋಮಾನದ ಸುಮಾರು 7.5 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ. ಶಾಲೆ ಮತ್ತು ಕಾಲೇಜುಗಳ ಆವರಣದಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುವಂತೆ ಡಿಡಿಪಿಐ ಮತ್ತು ಬಿಇಒಗಳಿಗೂ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರದಲ್ಲಿ ಹೆಚ್ಚಿದ ಸೋಂಕು ಪ್ರಕರಣಗಳು

ನಗರದಲ್ಲಿ ಕಳೆದ ಆರು ದಿನಗಳಿಂದ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಭಾನುವಾರ ನಗರದಲ್ಲಿ 923 ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸಾವಿಗೀಡಾಗಿದ್ದಾರೆ.

ಡಿ.27ರಂದು 269, 28ರಂದು 400, 29ರಂದು 565, 30ರಂದು 656, 31ರಂದು 810 ಪ್ರಕರಣಗಳು ದೃಢಪಟ್ಟಿದ್ದವು.

ನಗರದಲ್ಲಿ 8,671ರಷ್ಟು ಸಕ್ರಿಯ ಪ್ರಕರಣಗಳಿವೆ. ಭಾನುವಾರ 42,069 ಮಂದಿ ಪರೀಕ್ಷೆ ಕೈಗೊಳ್ಳಲಾಗಿದೆ. ಇದರಿಂದ, ಇದುವರೆಗೆ ಒಟ್ಟು 2.37 ಕೋಟಿ ಮಂದಿಯ ಪರೀಕ್ಷೆ ಕೈಗೊಳ್ಳಲಾಗಿದೆ.

ಮಕ್ಕಳಿಗೆ ಲಸಿಕೆ: ಬಿಬಿಎಂಪಿ ಸಿದ್ಧತೆ

15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಅಭಿಯಾನಕ್ಕೆ ಬಿಬಿಎಂಪಿ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ.

ಈ ವಯೋಮಾನದ ಸುಮಾರು 7.5 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ. ಶಾಲೆ ಮತ್ತು ಕಾಲೇಜುಗಳ ಆವರಣದಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುವಂತೆ ಡಿಡಿಪಿಐ ಮತ್ತು ಬಿಇಒಗಳಿಗೂ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.