ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಲೇ ಬಂದಿವೆ. ಈ ಕುರಿತು ಸರ್ಕಾರಶೀಘ್ರ ಕ್ರಮಕೈಗೊಳ್ಳಬೇಕು’ ಎಂದು ಟ್ರೇಡ್ ಯೂನಿಯನ್ ಕೋ–ಆರ್ಡಿನೇಷನ್ ಸೆಂಟರ್‌ನ ಅಧ್ಯಕ್ಷ ಜಿ.ಆರ್.ಶಿವಶಂಕರ್ ಒತ್ತಾಯಿಸಿದ್ದಾರೆ.
ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು,‘₹100 ಕೋಟಿಗೂ ಹೆಚ್ಚು ಲಾಭ ಗಳಿಸುತ್ತಿದ್ದ ಸಂಸ್ಥೆ ಅಧಿಕಾರಿಗಳು ನಡೆಸುತ್ತಿರುವ ಭ್ರಷ್ಟಾಚಾರದಿಂದಾಗಿ ಕೇವಲ ₹70 ಕೋಟಿ ಲಾಭ ಗಳಿಸುವ ಸ್ಥಿತಿ ತಲುಪಿದೆ.ಸಾರ್ವಜನಿಕ ಉದ್ದಿಮೆಗಳಲ್ಲಿ ಲೂಟಿ ಮಾಡುತ್ತಿರುವವರ ವಿರುದ್ಧ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಕೂಡಲೇ ಕಠಿಣ ಕ್ರಮಕೈಗೊಳ್ಳಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.