ಬೆಂಗಳೂರು: ಕಾಟನ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ಗಣೇಶ್ ಎಂಬಾತ, ರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಇರಿತದಿಂದ ತೀವ್ರ ಗಾಯಗೊಂಡಿದ್ದ ಮಾರಿ ಎಂಬುವರು ಮೃತಪಟ್ಟಿದ್ದಾರೆ.
ಐವರು ದಾರಿಹೋಕರು ತೀವ್ರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೃತ್ಯದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆರೋಪಿಯನ್ನು ಬಂಧಿಸಿ ಚಾಕು ಜಪ್ತಿ ಮಾಡಿದ್ದಾರೆ.
'ಪಿಳ್ಳಪ್ಪ ಗಾರ್ಡನ್ ನಿವಾಸಿಯಾದ ಗಣೇಶ್, ಕೂಲಿ ಕಾರ್ಮಿಕ. ಕುರಿಮಾಂಸ ಖರೀದಿಸಲು ಬೆಳಿಗ್ಗೆ ಅಂಗಡಿಗೆ ಬಂದಿದ್ದ. ಅಂಗಡಿಯಲ್ಲಿ ಇದ್ದ ಚಾಕು ತೆಗೆದುಕೊಂಡು ಬಂದು ಕೃತ್ಯ ಎಸಗಿದ್ದಾನೆ' ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.