ADVERTISEMENT

ಪರಿಷತ್‌ ಚುನಾವಣೆ: ಉಸ್ತುವಾರಿಗಳ ನೇಮಿಸಿದ ಬಿಜೆಪಿ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2023, 15:39 IST
Last Updated 27 ಆಗಸ್ಟ್ 2023, 15:39 IST
ಬಿಜೆಪಿ
ಬಿಜೆಪಿ    

ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರರ ಮತ್ತು ಶಿಕ್ಷಕರ ಏಳು ಕ್ಷೇತ್ರಗಳಿಗೆ 2024ರ ಜೂನ್‌ನಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ, ಪ್ರತಿ ಕ್ಷೇತ್ರಕ್ಕೂ ಒಬ್ಬ ಉಸ್ತುವಾರಿಯನ್ನು ನೇಮಿಸಿದೆ.

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಎರಡೂ ಕ್ಷೇತ್ರಗಳಿಗೆ ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಶಾಸಕ ಆರ್‌. ಅಶೋಕ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಸದ ಡಿ.ವಿ. ಸದಾನಂದ ಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಶಾಸಕ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT