
ಪ್ರಜಾವಾಣಿ ವಾರ್ತೆಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನ.10ರಂದು ನಡೆಯಲಿದ್ದು, ಮುಂಜಾಗ್ರತೆಯಾಗಿ ಅಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12ರವೆರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ಸಂಬಂಧ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.
‘ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಹಾಗೂ ಅಭ್ಯರ್ಥಿ ಪರ ಕೆಲ ಕಾರ್ಯಕರ್ತರು, ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಭವವಿದೆ. ಗುಪ್ತದಳದ ಮಾಹಿತಿ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾ
ಗಿದೆ. 5ಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು, ಯಾವುದೇ ಮೆರವಣಿಗೆ ಮಾಡಬಾರದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬಾರದು’ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.