ಬೆಂಗಳೂರು: ಶಿವಾನಂದ ಮೇಲ್ಸೇತುವೆ ಕಾಮಗಾರಿ ವಿರುದ್ಧ ಹೋರಾಟ ಸಂಬಂಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಿಂದ ಆಮ್ ಆದ್ಮಿ ಪಕ್ಷದ (ಎಎಪಿ) 17 ಮಂದಿಯನ್ನು 1ನೇ ಎಸಿಎಂಎಂ ನ್ಯಾಯಾಲಯ ಖುಲಾಸೆಗೊಳಿಸಿದೆ.
ಶಿವಾನಂದ ಮೇಲ್ಸೇತುವೆ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, 2022ರ ಆಗಸ್ಟ್‌ನಲ್ಲಿ ಹೋರಾಟ ನಡೆದಿತ್ತು. ‘40 ಪರ್ಸೆಂಟ್ ಕಮಿಷನ್ ಸರ್ಕಾರ’ ಎಂದು ಆರೋಪಿಸಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಎಎಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಸೇರಿ ಹಲವರು ಪ್ರತಿಭಟನೆ ನಡೆಸಿದ್ದರು. 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪರ ಪಕ್ಷದ ಕಾನೂನು ವಿಭಾಗದ ಮುಖ್ಯಸ್ಥ ಹಾಗೂ ವಕೀಲ ದಿವಾಕರ್ ಅವರ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.