ADVERTISEMENT

ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿ ಆರೋಪ: ಎಫ್‌ಐಆರ್ ರದ್ದತಿಗೆ ಕೋರ್ಟ್ ನಕಾರ

ಮಹದೇವಪುರ: ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ್ದ ಆರೋಪ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 19:47 IST
Last Updated 28 ನವೆಂಬರ್ 2022, 19:47 IST
   

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಅಧಿಕಾರಿಗಳಿಗೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿ ಸಿದಂತೆ ನಗರದ ಅಪಾರ್ಟ್‌ಮೆಂಟ್‌ ನಿವಾಸಿಗಳ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

‘ನಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು’ ಎಂದು ಕೋರಿ ಮಹದೇಪುರದ ‘ಶಿಲ್ಪಿತಾ ಸ್ಪ್ಲೆಂಡರ್ ಅನೆಕ್ಸ್’ ಅಪಾರ್ಟ್‌ ಮೆಂಟ್‌ನ 23 ಫ್ಲ್ಯಾಟ್‌ ನಿವಾಸಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ವಜಾಗೊಳಿಸಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದ ಫೋಟೊ ಮತ್ತು ವಿಡಿಯೊ ದೃಶ್ಯವಾಳಿ ಗಮನಿಸಿ ದಾಗ ಅರ್ಜಿದಾರರು ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಸರ್ಕಾರಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವ ಉದ್ದೇಶದಿಂದ ಇವರೆಲ್ಲಾ ಒಟ್ಟಾಗಿ ದ್ದಾರೆ.

ADVERTISEMENT

ಇದು ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 149 (ಅಕ್ರಮ ಕೂಟ ರಚನೆ) ಮತ್ತು ಕಲಂ 143ರ (ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ) ಅಡಿಯಲ್ಲಿ ಅಪರಾಧವಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಪ್ರಕರಣವೇನು?:ಮಹದೇವಪುರ ಗ್ರಾಮದ ಸರ್ವೇ ನಂ. 151/1 ಮತ್ತು 151/4 ಮತ್ತು 119ರಲ್ಲಿ ಒತ್ತುವರಿಯಾಗಿರುವ ರಾಜಕಾಲುವೆ ಜಾಗ ತೆರವುಗೊಳಿಸುವಂತೆ 2020ರ ಜನವರಿ 16ರಂದು ಹೈಕೋರ್ಟ್ ಆದೇಶಿಸಿತ್ತು. ಇದರ ಅನುಸಾರ ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಮಾಲತಿ 2020ರ ಮಾರ್ಚ್ 31ರಂದು ಒತ್ತುವರಿ ಜಾಗದ ಸರ್ವೇ ನಡೆಸಲು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ದ್ದರು. ಆಗ ಅಪಾರ್ಟ್‌ಮೆಂಟ್‌ ನಿವಾಸಿ ಗಳು ಒಟ್ಟುಗೂಡಿ ಪ್ರತಿಭಟನೆ ನಡೆಸಿದ್ದರು.

ಈ ಕುರಿತು ಮಾಲತಿಮಹದೇವಪುರ ಠಾಣೆಗೆ ದೂರು ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.