ADVERTISEMENT

ನ್ಯಾಯಾಲಯಗಳ ಕಲಾಪ ಅವಧಿ ಬದಲು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 22:56 IST
Last Updated 20 ಮಾರ್ಚ್ 2020, 22:56 IST
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್   

ಬೆಂಗಳೂರು: ಕೊರೊನಾ ವೈರಸ್ ಹರಡಬಹುದು ಎಂಬ ಕಾರಣಕ್ಕೆ ಇದೇ 23ರಿಂದ ಹೈಕೋರ್ಟ್ ಹಾಗೂ ಕೆಳಹಂತದ ನ್ಯಾಯಾಲಯಗಳ ಕಲಾಪದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಈ ಸಂಬಂಧ ಶುಕ್ರವಾರ ಸುತ್ತೋಲೆ ಹೊರಡಿಸಲಾಗಿದೆ.

‘ಹೈಕೋರ್ಟ್‌ನಲ್ಲಿ ಬೆಳಿಗ್ಗೆ 10.30ರಿಂದ 1.30ರವರೆಗೆ ಮಾತ್ರ ಕಲಾಪ ಇರುತ್ತದೆ. ತುರ್ತು ಪ್ರಕರಣಗಳನ್ನು ಮಾತ್ರವೇ ವಿಚಾರಣೆ ನಡೆಸಲಾಗುತ್ತದೆ’ ಎಂದುಹೈಕೋರ್ಟ್ ರಿಜಿಸ್ಟ್ರಾರ್ ತಿಳಿಸಿದ್ದಾರೆ.

ಬೆಂಗಳೂರು ನಗರದ ಸಿಟಿ ಸಿವಿಲ್ ನ್ಯಾಯಾಲಯ, ಗ್ರಾಮೀಣ ನ್ಯಾಯಾಲಯ, ಕೌಟುಂಬಿಕ ಹಾಗೂ ಕಾರ್ಮಿಕ ನ್ಯಾಯಾಲಯಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಮಾತ್ರ ಕಲಾಪ ನಡೆಯಲಿದೆ.

ADVERTISEMENT

ಜೊತೆಗೆ, ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ಮಾತ್ರ ಕಲಾಪಗಳು ಇರಲಿವೆ. ಈ ಬಗ್ಗೆಯೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.