ADVERTISEMENT

ಬೆಂಗಳೂರು ನಗರದಲ್ಲಿ ಕೋವಿಡ್‌ ದೃಢ ಪ್ರಮಾಣ ಏರಿಕೆ: ಬಿಬಿಎಂಪಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2022, 19:34 IST
Last Updated 11 ಜೂನ್ 2022, 19:34 IST
ಕೋವಿಡ್ ಪರೀಕ್ಷೆ (ಸಾಂದರ್ಭಿಕ ಚಿತ್ರ)
ಕೋವಿಡ್ ಪರೀಕ್ಷೆ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ರಾಜಧಾನಿಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳಗೊಳ್ಳುತ್ತಿದ್ದು, ದೃಢ ಪ್ರಮಾಣವು ಶೇ 1.1ರಿಂದ ಶೇ 2.9ಕ್ಕೆ ಏರಿಕೆಯಾಗಿದೆ.

ಬಿಬಿಎಂಪಿ ಬಿಡುಗಡೆ ಮಾಡಿರುವ ಮಾಹಿತಿಯಂತೆ ನಗರ ದಲ್ಲಿ ಮೇ 31ರಂದು 178 ಪ್ರಕರಣಗಳು ವರದಿಯಾಗಿದ್ದವು. ಜೂನ್ 10ರ ವೇಳೆಗೆ 494ಕ್ಕೆ ಏರಿಕೆಯಾಗಿದೆ. ಮಹದೇವಪುರ ವಾರ್ಡ್‌ನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ.

‘ನಮ್ಮ ವಲಯದಲ್ಲಿ ಹೆಚ್ಚಿನ ಜನಸಂಖ್ಯೆ ಇದೆ. ಹೀಗಾಗಿ, ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿವೆ’ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿ (ಮಹದೇವಪುರ) ಡಾ.ಆರ್‌.ಸುರೇಂದ್ರ ವಿವರಿಸಿದರು.

ADVERTISEMENT

ಈ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವುದೇ ಇದಕ್ಕೆ ಕಾರಣ ಎನ್ನುತ್ತಾರೆ ಬಿಬಿಎಂಪಿ ಅಧಿಕಾರಿಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.