ADVERTISEMENT

ಚಿಕಿತ್ಸೆ ಸಿಗದೆ ಅಬಕಾರಿ ನೌಕರ ಸಾವು

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 20:55 IST
Last Updated 15 ಜುಲೈ 2020, 20:55 IST

ಬೆಂಗಳೂರು: ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಾಡಿ ಅಬಕಾರಿ ಇಲಾಖೆಯ ನೌಕರರೊಬ್ಬರು ಬುಧವಾರ ಮೃತಪಟ್ಟಿದ್ದಾರೆ.

ಕೆಮ್ಮಿನಿಂದ ಬಳಲುತ್ತಿದ್ದ ಅಬಕಾರಿ ಇಲಾಖೆಯ 58 ವರ್ಷದ ನೌಕರ ಮನೆಯಲ್ಲೇ ಕುಸಿದು ಬಿದ್ದಿದ್ದರು. ಖಾಸಗಿ ಆಸ್ಪತ್ರೆಯೊಂದಕ್ಕೆ ಕುಟುಂಬದವರು ಕರೆದೊಯ್ದಿದ್ದರು.‌ ಹಾಸಿಗೆ ಖಾಲಿ ಇಲ್ಲದ ಕಾರಣ ಪ್ರವೇಶ ಸಿಗಲಿಲ್ಲ. ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ ವಿಚಾರಣೆ ನಡೆಸಿ ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.

‘ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ದೊರೆತಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತು’ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

5 ದಿನಗಳ ಬಳಿಕ ಅಂತ್ಯಕ್ರಿಯೆ:‍ಪುಲಕೇಶಿನಗರದ ಮಹಿಳೆಯೊಬ್ಬರು ಮೃತಪಟ್ಟು 5 ದಿನಗಳ ಬಳಿಕ ಬುಧವಾರ ಅಂತ್ಯ ಸಂಸ್ಕಾರ ನಡೆಸಲಾಗಿದೆ. ಕೋವಿಡ್ ಪರೀಕ್ಷಾ ವರದಿ ಬರುವುದು ವಿಳಂಬವಾದ ಕಾರಣ ಶವಾಗಾರದಲ್ಲಿ ಮೃತದೇಹ ಇರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.