ADVERTISEMENT

ಕೋವಿಡ್-19: ನಿರಾಶ್ರಿತರಿಗೆ ತುರ್ತು ಅಹಾರ ವ್ಯವಸ್ಥೆಗೆ ನೋಡಲ್ ಅಧಿಕಾರಿಗಳ ನೇಮಕ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 13:39 IST
Last Updated 2 ಏಪ್ರಿಲ್ 2020, 13:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನಗದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆ‌, ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂಬ ಕಾರಣಕ್ಕೆ ಸರ್ಕಾರ ಹಾಗೂ ಪಾಲಿಕೆಯಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ.

ಸಂಕಷ್ಟದಲ್ಲಿರುವ ನಿರಾಶ್ರಿತರು ಅಥವಾ ಅಗತ್ಯವಿರುವರಿಗೆ ಊಟದ ವ್ಯವಸ್ಥೆ ಮಾಡಲು ಹಲವಾರು ಸರ್ಕಾರೇತರ ಸಂಸ್ಥೆಗಳು ಮನವಿ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಂಡು ಆಹಾರ ಅಥವಾ ಇನ್ನಿತರೆ ಅಗತ್ಯ ವಸ್ತುಗಳನ್ನು ಹಂಚುವ ಸಂಬಂಧ ಜಂಟಿ ಆಯುಕ್ತರು (ಆರೋಗ್ಯ) ಸರ್ಫರಾಜ್ ಖಾನ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ನೆರವು ನೀಡುವ ಸ್ವಯಂ ಸೇವಾ ಸಂಸ್ಥೆಗಳು ಅನುಮತಿ ಪಡೆಯುವ ಸಲುವಾಗಿ ದೂ.ಸಂ: 080-22975591 /9448111066 ಅನ್ನು ಸಂಪರ್ಕಿಸಬಹುದು.

ADVERTISEMENT

ವಲಯವಾರು ಆಹಾರ ಧಾನ್ಯಗಳ ಪೊಟ್ಟಣ ವಿತರಿಸುವ ಕಾರ್ಯ ನಿರ್ವಹಿಸಲು ವಿಶೇಷ ಆಯುಕ್ತರು (ಘನತ್ಯಾಜ್ಯ) ಡಿ.ರಂದೀಪ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಅವರ ಅಧೀನದಲ್ಲಿ ಎಲ್ಲಾ ವಲಯಗಳಿಗೆ 5 ಉಸ್ತುವಾರಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.