ADVERTISEMENT

ಹಾಸಿಗೆ ನೀಡದೇ ಇದ್ದರೆ ಆಸ್ಪತ್ರೆಗಳ ಮಾನ್ಯತೆ ರದ್ದು: ಡಿಸಿಎಂ ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 20:53 IST
Last Updated 13 ಜುಲೈ 2020, 20:53 IST
ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ
ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ    

ಬೆಂಗಳೂರು: ಕೋವಿಡ್‌–19 ಸೋಂಕಿತರಿಗಾಗಿ ಶೇ50 ರಷ್ಟು ಹಾಸಿಗೆಗಳನ್ನು ಈವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆ ಕೂಡಲೇ ರದ್ದು ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.

ಮುಖ್ಯಮಂತ್ರಿ ಅವರು ಜಿಲ್ಲಾಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೊ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಕಾಲಕ್ಕೆ ಸರ್ಕಾರಕ್ಕೆ ಖಾಸಗಿ ಆಸ್ಪತ್ರೆಗಳು ಹಾಸಿಗೆಗಳನ್ನು ಹಸ್ತಾಂತರ ಮಾಡದೇ ಇರುವುದರಿಂದ ಸಮಸ್ಯೆ ಆಗಿದೆ. ಇಡೀ ಸಮಸ್ಯೆಯ ಬಗ್ಗೆಯೇ ಖಾಸಗಿಯವರು ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT