ADVERTISEMENT

ಬೆಂಗಳೂರು | ಕೋವಿಡ್: ವಾರದಲ್ಲಿ 548 ಪ್ರಕರಣ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2022, 16:08 IST
Last Updated 5 ಅಕ್ಟೋಬರ್ 2022, 16:08 IST

ಬೆಂಗಳೂರು: ನಗರದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಕಳೆದೊಂದು ವಾರದಲ್ಲಿ 548 ಮಂದಿ ಸೋಂಕಿತರಾಗಿದ್ದಾರೆ.

ಕಳೆದ ತಿಂಗಳು ಬಹುತೇಕ ವಾರಗಳಲ್ಲಿ ಸಾವಿರಕ್ಕೂ ಅಧಿಕ ಪ‍್ರಕರಣಗಳು ದೃಢಪಟ್ಟಿದ್ದವು. ವಾರದಲ್ಲಿ 54,740 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 1ರಷ್ಟಿದೆ. ಏಳು ದಿನಗಳ ಅವಧಿಯಲ್ಲಿ 398 ಮಂದಿ ಚೇತರಿಸಿಕೊಂಡಿದ್ದಾರೆ. ಈ ಅವಧಿಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.

ಕೋವಿಡ್ಹೊಸ ಪ್ರಕರಣಗಳ ಜತೆಗೆ ಆಸ್ಪತ್ರೆ ದಾಖಲಾತಿಯೂ ಇಳಿಕೆಯಾಗಿದೆ. ಸಕ್ರಿಯ ಪ್ರಕರಣಗಳು 2,300ರ ಗಡಿಯೊಳಗಿದ್ದು, ಸೋಂಕಿತರಲ್ಲಿ 17 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರಲ್ಲಿಐವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಒಬ್ಬರಿಗೆ ಎಚ್‌ಡಿಯು ಹಾಸಿಗೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 11 ಮಂದಿಗೆ ಸಾಮಾನ್ಯ ಹಾಸಿಗೆಯಲ್ಲಿಯೇ ಚಿಕಿತ್ಸೆ ಒದಗಿಸಲಾಗುತ್ತಿದೆ. ನಗರದಲ್ಲಿ ಈವರೆಗೆ ವರದಿಯಾದಕೋವಿಡ್ಪ್ರಕರಣಗಳ ಒಟ್ಟು ಸಂಖ್ಯೆ 18.72 ಲಕ್ಷ ತಲುಪಿದೆ. ಸೋಂಕಿತರಲ್ಲಿ 18.52 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ಈವರೆಗೆ ವರದಿಯಾದ ಕೋವಿಡ್ ಪ್ರಕರಣಗಳಲ್ಲಿ ಶೇ 98.97ರಷ್ಟು ಮಂದಿ ಚೇತರಿಸಿಕೊಂಡಿದ್ದಾರೆ. ಮರಣ ಪ್ರಮಾಣ ದರವು ಶೇ 0.18ರಷ್ಟಿದೆ.

ದೇಶದ ಪ್ರಮುಖ ಮಹಾನಗರಗಳಿಗೆ ಹೋಲಿಸಿದರೆಅಧಿಕ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಮಹಾನಗರಗಳಲ್ಲಿ ಬೆಂಗಳೂರು ದ್ವಿತೀಯ ಸ್ಥಾನದಲ್ಲಿದೆ. ಚೆನ್ನೈನಲ್ಲಿ 2,300ಕ್ಕೂ ಅಧಿಕ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.