ADVERTISEMENT

ಮಕ್ಕಳ ಆರೈಕೆ ಕೇಂದ್ರ ಆರಂಭಕ್ಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 28 ಮೇ 2021, 21:53 IST
Last Updated 28 ಮೇ 2021, 21:53 IST
ಗೋವಿಂದಪುರದ ಮೊಬೈಲ್ ಕ್ಲಿನಿಕ್ ಕಾರ್ಯವೈಖರಿಯನ್ನು ಜಿಲ್ಲಾಧಿಕಾರಿ ಶ್ರೀನಿವಾಸ್ ಹಾಗೂ ತಹಶೀಲ್ದಾರ್‌ ಮಂಜುನಾಥ ಕೆ. ವೀಕ್ಷಿಸಿದರು.
ಗೋವಿಂದಪುರದ ಮೊಬೈಲ್ ಕ್ಲಿನಿಕ್ ಕಾರ್ಯವೈಖರಿಯನ್ನು ಜಿಲ್ಲಾಧಿಕಾರಿ ಶ್ರೀನಿವಾಸ್ ಹಾಗೂ ತಹಶೀಲ್ದಾರ್‌ ಮಂಜುನಾಥ ಕೆ. ವೀಕ್ಷಿಸಿದರು.   

ದಾಬಸ್‌ಪೇಟೆ: ’ಜಿಲ್ಲೆಯಲ್ಲಿ ಮಕ್ಕಳು ಕೋವಿಡ್ ಸೋಂಕಿಗೆ ತುತ್ತಾಗುತ್ತಿದ್ದು, ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದು ಈಗಾಗಲೇ ತಜ್ಞರು ಎಚ್ಚರಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಿಗಾಗಿಯೇ ಆರೈಕೆ ಕೇಂದ್ರಗಳನ್ನು ತೆರೆಯಲಾಗುವುದು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ನರಸೀಪುರ ಪಂಚಾಯಿತಿಯ ಗೋವಿಂದಪುರ ಗ್ರಾಮಕ್ಕೆ ಭೇಟಿ ನೀಡಿ, ಮೊಬೈಲ್ ಕ್ಲಿನಿಕ್ ಕಾರ್ಯವೈಖರಿ ವೀಕ್ಷಿಸಿ ಮಾತನಾಡಿದರು.

ಕೊರೊನಾ ಎರಡನೇ ಅಲೆ ತಡೆಯಲು ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರತಿ ಹೋಬಳಿಯಲ್ಲೊಂದು ಕೋವಿಡ್ ಆರೈಕೆ ಕೇಂದ್ರ ತೆರೆಯಲಾಗುವುದು ಎಂದರು.

ADVERTISEMENT

ದಾಬಸ್‌ಪೇಟೆ ಪಟ್ಟಣದಲ್ಲಿರುವ ಆರೋಗ್ಯ ಭಾರತಿ ಆಸ್ಪತ್ರೆಯಲ್ಲಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ ಕಾರಣ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಮಾಲೀಕ ಡಾ.ಚಂದ್ರಶೇಖರ್‌ ಅವರನ್ನು ತರಾಟೆಗೆ ತೆಗೆದುಕೊಂಡರು. ಇದೇ ವೇಳೆ ಕೆಲ ಸಮಸ್ಯೆಗಳು ಕಂಡು ಬಂದದ್ದರಿಂದ ತಾತ್ಕಾಲಿಕವಾಗಿ ಆಸ್ಪತ್ರೆ ಮುಚ್ಚಲು ತಾಲ್ಲೂಕು ಆರೋಗ್ಯಾಧಿಕಾರಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.