ಆನೇಕಲ್: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಸಾರ್ವಜನಿಕ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಇದನ್ನು ತೆರವುಗೊಳಿಸಿ ಜುಲೈ 1ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಹಣಾಧಿಕಾರಿ ವನಶ್ರೀ ವಿಪಿನ್ ಸಿಂಗ್ ಅವರು ತಿಳಿಸಿದರು.
ಸರ್ಕಾರದ ಮಾರ್ಗಸೂಚಿಯಂತೆ ಪ್ರವೇಶ ನೀಡಲಾಗುವುದು.ಶೇ50ರಷ್ಟು ಮಂದಿಗೆ ಮಾತ್ರ ಉದ್ಯಾನ ವೀಕ್ಷಣೆಗೆ ಅವಕಾಶ ನೀಡಲಾಗುವುದು.ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಪ್ರವೇಶಕ್ಕೆ ಆನ್‌ಲೈನ್‌ನಲ್ಲಿಯೂ ಟಿಕೆಟ್ ಪಡೆಯಲು ಅವಕಾಶವಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.