ADVERTISEMENT

ಶವ ಸಂಸ್ಕಾರಕ್ಕೆ 5 ಮಂದಿಗಷ್ಟೇ ಅವಕಾಶ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 21:54 IST
Last Updated 25 ಏಪ್ರಿಲ್ 2021, 21:54 IST

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಜನರು ಗುಂಪು ಸೇರುವುದಕ್ಕೆ ಕೆಲ ನಿರ್ಬಂಧಗಳನ್ನು ವಿಧಿಸಿದೆ.

ಇನ್ನು ಮುಂದೆ ಅಂತ್ಯಕ್ರಿಯೆಯಲ್ಲಿ ಗರಿಷ್ಠ 5 ಮಂದಿಯಷ್ಟೇ ಭಾಗವಹಿಸಬೇಕೆಂದು ಆದೇಶಿಸಿದೆ.

‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತರು, ಪೊಲೀಸ್‌ ಆಯುಕ್ತರು, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಇತರ ಇಲಾಖೆಯ ಮುಖ್ಯಸ್ಥರು ಮತ್ತು ಅಧಿಕಾರಿಗಳು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು’ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌ ಸುತ್ತೋಲೆ ಹೊರಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.