ADVERTISEMENT

ಕೋವಿಡ್ 19: ಸಕ್ರಿಯ ಪ್ರಕರಣಗಳ ಸಂಖ್ಯೆ100ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 27 ಮೇ 2025, 16:22 IST
Last Updated 27 ಮೇ 2025, 16:22 IST
   

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 36 ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 100ಕ್ಕೆ ಏರಿಕೆಯಾಗಿದೆ. 

ಕೊರೊನಾ ವೈರಾಣು ಪತ್ತೆ ಸಂಬಂಧ 24 ಗಂಟೆಗಳ ಅವಧಿಯಲ್ಲಿ 381 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 9.44 ರಷ್ಟಿದೆ. ಸಕ್ರಿಯ ಪ್ರಕರಣಗಳಲ್ಲಿ 96 ಮಂದಿ ಮನೆ ಆರೈಕೆಗೆ ಒಳಗಾದರೆ, ನಾಲ್ಕು ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಈ ವರ್ಷ 171 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ‍ಪ್ರಕರಣಗಳಲ್ಲಿ 70 ಮಂದಿ ಈಗಾಗಲೇ ಚೇತರಿಸಿಕೊಂಡಿದ್ದಾರೆ. ಸೋಂಕಿತರಲ್ಲಿ ಈವರೆಗೆ ಒಬ್ಬರು ಮೃತಪಟ್ಟಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.