ADVERTISEMENT

ಏಳು ತಿಂಗಳ ಮಗುವಿನೊಂದಿಗೆ ಅಲೆದಾಟ

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 20:20 IST
Last Updated 9 ಜುಲೈ 2020, 20:20 IST

ಬೆಂಗಳೂರು: ಕೊರೊನಾ ಸೋಂಕಿತ 7 ತಿಂಗಳ ಮಗುವಿನೊಂದಿಗೆ ತಾಯಿಯೊಬ್ಬರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದರು.

36 ವರ್ಷದ ಪತಿಗೆ ಇತ್ತೀಚಿಗೆ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿ ಹೋಮ್ ಕ್ವಾರಂಟೈನ್‌ನಲ್ಲಿ ಇದ್ದರು. ತಾಯಿ ಮತ್ತು ಮಗುವಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಬುಧವಾರ ರಾತ್ರಿ ಕರೆ ಮಾಡಿದ ಬಿಬಿಎಂಪಿ ಸಿಬ್ಬಂದಿ ಸೋಂಕು ದೃಢಪಟ್ಟಿರುವ ಬಗ್ಗೆಮಾಹಿತಿ ನೀಡಿದ್ದರು.

ಗುರುವಾರ ಟೆಂಪೊಟ್ರಾವೆಲರ್ ವಾಹನ ಬಂತಾದರೂ, ಆಸ್ಪತ್ರೆಗಳಲ್ಲಿ ಜಾಗ ಸಿಗದೆ ಪರದಾಡಿದರು. ಬಿಜಿಎಸ್ ಆಸ್ಪತ್ರೆಯಲ್ಲಿ ವೈದ್ಯರಿಗಾಗಿ 3 ಗಂಟೆ ಕಾಲ ಕಾದರು. ನಂತರವೂ ಆಸ್ಪತ್ರೆಯಲ್ಲಿ ಅವಕಾಶ ಸಿಗಲಿಲ್ಲ. ಹಲವು ಖಾಸಗಿ ಆಸ್ಪತ್ರೆಗಳಿಗೆ ಸುತ್ತಾಡಿ, ಸ್ಥಳೀಯ ಜನಪ್ರತಿನಿಗಳ ಸಹಾಯದಿಂದ ಸಂಜೆ ವೇಳೆಗೆ ಕೆ.ಸಿ.ಜನರಲ್ ಆಸ್ಪತ್ರೆಗೆ ಮಗು ದಾಖಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.