ಬೆಂಗಳೂರು:ಬೆಂಗಳೂರಿನಲ್ಲಿ ಮೂವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಸಂಜೆ ಸುದ್ದಿಗೋಷ್ಠಿ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮತ್ತೊಬ್ಬ ಯುವಕನಿಗೆ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದರು. 25 ವರ್ಷದ ಯುವಕ ಅಮೆರಿಕದಿಂದ ಮಾರ್ಚ್ 16ರಂದು ಮರಳಿದ್ದರು ಎಮದು ಅವರು ಮಾಹಿತಿ ನೀಡಿದರು.
ಬೆಳಗ್ಗೆಇಬ್ಬರಿಗೆ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದರು.
ಸೋಂಕು ತಗಲಿರುವ ಒಬ್ಬ ವ್ಯಕ್ತಿಯ ವಯಸ್ಸು56. ಇವರು ಅಮೆರಿಕಪ್ರವಾಸದಿಂದ ಮಾರ್ಚ್ 6ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆ. ಇವರು ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದು, ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.