ADVERTISEMENT

ಕೋವಿಡ್: ರಾಜ್ಯದಲ್ಲಿ 40 ಹೊಸ ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 28 ಮೇ 2025, 20:08 IST
Last Updated 28 ಮೇ 2025, 20:08 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಬುಧವಾರ 40 ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಈ ವರ್ಷ ವರದಿಯಾದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 211ಕ್ಕೆ ಏರಿಕೆಯಾಗಿದೆ. 

ಕೋವಿಡ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಿದ್ದು, 24 ಗಂಟೆಗಳ ಅವಧಿಯಲ್ಲಿ 395 ಪರೀಕ್ಷೆಗಳನ್ನು ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 10.12ರಷ್ಟಿದೆ. ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 126ಕ್ಕೆ ತಲುಪಿದೆ.

ಸಕ್ರಿಯ ಪ್ರಕರಣಗಳಲ್ಲಿ 124 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.