ಬೆಂಗಳೂರು: ಕೋವಿಡ್ ದೃಢೀಕರಣ ಪ್ರಮಾಣ ಶೇ 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಸಡಿಸಲು ಸೂಚಿಸಲಾಗಿದೆ.
ಪರಿಷ್ಕೃತ ಮಾರ್ಗಸೂಚಿಯನ್ನು ಗುರುವಾರ ರಾತ್ರಿ ಹೊರಡಿಸಲಾಗಿದೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಸೂಕ್ತ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಗಣೇಶೋತ್ಸವ ಕ್ಕೆ ಅನುಕೂಲ ಮಾಡಿಕೊಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವ್ಯಾಖ್ಯಾನಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.