ಬೆಂಗಳೂರು: ಹೆಬ್ಬಾಳದ ಪಶುವೈದ್ಯ ಕಾಲೇಜಿನ ಆವರಣದಲ್ಲಿ 60 ಹಾಸಿಗೆ ಸಾಮರ್ಥ್ಯದ ಕೋವಿಡ್ ಆರೈಕೆ ಕೇಂದ್ರ ಆರಂಭವಾಗಿದ್ದು, ಕೇಂದ್ರವನ್ನು ಶಾಸಕ ಬೈರತಿ ಸುರೇಶ್ ಗುರುವಾರ ಉದ್ಘಾಟಿಸಿದರು. ‘ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಇಲ್ಲದೇ ಪರದಾಡುವಂತ ಸ್ಥಿತಿ ಉಂಟಾಗಿದ್ದು, ಇದನ್ನು ದೃಷ್ಟಿಯಲ್ಲಿಟ್ಟು ಕೊಂಡು ಇಲ್ಲಿ ಕೇಂದ್ರ ಆರಂಭಿಸಲಾಗಿದೆ‘ ಎಂದು ಸುರೇಶ್ ಹೇಳಿದರು.
‘ಕೋವಿಡ್ ಆರೈಕೆ ಕೇಂದ್ರ ಆರಂಭದಿಂದ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆ ಆಗಲಿದೆ. ರೋಗ ಲಕ್ಷಣ ಇಲ್ಲದ ಸೋಂಕಿತರು ಮನೆಯಲ್ಲಿ ಪ್ರತ್ಯೇಕವಾಗಿ ಆರೈಕೆಗೆ ಒಳಗಾಗಲು ಸೌಲಭ್ಯವಿಲ್ಲದಿದ್ದರೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬಹುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.