ADVERTISEMENT

ರಾತ್ರಿ ಕರ್ಫ್ಯೂ: ಕೈಗಾರಿಕಾ ನೌಕರರಿಗೆ ಗುರುತಿನ ಚೀಟಿ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 21:14 IST
Last Updated 10 ಏಪ್ರಿಲ್ 2021, 21:14 IST
   

ಬೆಂಗಳೂರು: ರಾತ್ರಿ ಕರ್ಫ್ಯೂ ವಿಧಿಸಿರುವ ಏಳು ಜಿಲ್ಲೆಗಳ ನಗರಗಳು ಮತ್ತು ಮಣಿಪಾಲದ ಕೈಗಾರಿಕೆಗಳ ನೌಕರರು ಕರ್ಫ್ಯೂ ಅವಧಿಯಲ್ಲಿ (ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ) ಓಡಾಡುವ ಸಂದರ್ಭದಲ್ಲಿ ತಮ್ಮ ಕಂಪನಿ ನೀಡಿದ ಗುರುತಿನ ಚೀಟಿ ಹೊಂದಿರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೈಗಾರಿಕೆಗಳ ಸುಗಮ ಕಾರ್ಯನಿರ್ವಹಣೆ ಮತ್ತು ನೌಕರರ ಓಡಾಟಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶ
ದಿಂದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಈ ಆದೇಶ ಹೊರಡಿಸಿದ್ದಾರೆ.

ನೌಕರರನ್ನು ಕರೆದೊಯ್ಯುವ ವಾಹನಗಳು ಆಯಾ ಕಂಪನಿಯ ಅಧಿಕೃತ ಪತ್ರ ಹೊಂದಿರಬೇಕು. ಅಲ್ಲದೆ, ಸಂಚಾರದ ವೇಳೆ ನೌಕರರು ಮತ್ತು ವಾಹನಗಳಲ್ಲಿ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು.

ADVERTISEMENT

ಬೆಂಗಳೂರು, ಮೈಸೂರು, ಮಂಗಳೂರು, ಉಡುಪಿ– ಮಣಿಪಾಲ, ಬೀದರ್‌, ಕಲಬುರ್ಗಿ ಮತ್ತು ತುಮಕೂರು ನಗರದಲ್ಲಿ ಏ.10ರಿಂದ 20ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.