ADVERTISEMENT

ಕೊರೊನಾ ಸೋಂಕು: ಬೆಂಗಳೂರು ಸಂಚಾರ ಕಾನ್‌ಸ್ಟೆಬಲ್ ಗುಣಮುಖ

​ಪ್ರಜಾವಾಣಿ ವಾರ್ತೆ
Published 30 ಮೇ 2020, 8:28 IST
Last Updated 30 ಮೇ 2020, 8:28 IST
   

ಬೆಂಗಳೂರು: ಕೊರೊನಾ ಸೋಂಕು ತಗುಲಿದ್ದ ನಗರದ ಸಂಚಾರ ಠಾಣೆ ಕಾನ್‌ಸ್ಟೆಬಲ್ ಗುಣಮುಖವಾಗಿದ್ದು, ಶನಿವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ.

ಫ್ರೇಜರ್ ಟೌನ್ ಸಂಚಾರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಕಾನ್‌ಸ್ಟೆಬಲ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದ ಅವರು, ಬಹುಬೇಗನೇ ಗುಣಮುಖವಾಗಿದ್ದಾರೆ. ಇತ್ತೀಚೆಗೆ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ವರದಿ ನೆಗಟಿವ್ ಬಂದಿದೆ.

ADVERTISEMENT

ಗುಣಮುಖವಾದ ಕಾನ್‌ಸ್ಟೆಬಲ್ ಅವರನ್ನು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್.ರವಿಕಾಂತೇಗೌಡ, ಡಿಸಿಪಿ ನಾರಾಯಣ ಅವರು ಸಂಜೆ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಸ್ವಾಗತಿಸಲಿದ್ದಾರೆ.

ಕಾನ್‌ಸ್ಟೆಬಲ್ ಬಹುಬೇಗನೇ ಹುಷಾರಾಗಿ ಬಂದಿರುವುದು ಪೊಲೀಸರಲ್ಲಿ ಸಂತೋಷವನ್ನುಂಟು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.