ADVERTISEMENT

ಸೀಲ್‌ಡೌನ್‌: ದಿನಸಿ ವಿತರಣೆ- ಬಿಬಿಎಂಪಿ ಜವಾಬ್ದಾರಿ

​ಪ್ರಜಾವಾಣಿ ವಾರ್ತೆ
Published 25 ಜೂನ್ 2020, 19:24 IST
Last Updated 25 ಜೂನ್ 2020, 19:24 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ‘ಸೀಲ್‍ಡೌನ್ ಪ್ರದೇಶಗಳಲ್ಲಿ ಆವಶ್ಯಕತೆ ಇರುವವರಿಗೆ ಆಹಾರ ಪದಾರ್ಥ ಮತ್ತು ಅಗತ್ಯ ದಿನಬಳಕೆ ವಸ್ತುಗಳನ್ನು ಪೂರೈಸುವುದು ಬಿಬಿಎಂಪಿ ಜವಾಬ್ದಾರಿ’ ಎಂದು ಹೈಕೋರ್ಟ್ ಹೇಳಿದೆ.

‘ಈ ಜವಾಬ್ದಾರಿ ನಿರ್ವಹಿಸುವಲ್ಲಿ ಬಿಬಿಎಂಪಿ ವಿಫಲವಾದರೆ ಸಾರ್ವಜನಿಕರ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಲಿವೆ. ಬಾಧಿತರು ಬಿಬಿಎಂಪಿಯಿಂದ ಪರಿಹಾರ ಕೇಳುವ ಹಕ್ಕು ಪಡೆದಿರುತ್ತಾರೆ’ ಎಂದು ಎಚ್ಚರಿಕೆ ನೀಡಿದೆ.

‘ಈ ದಿಸೆಯಲ್ಲಿ ರಾಜ್ಯ ಸರ್ಕಾರವೂ ಮುಂದೆ ಬಂದು ವ್ಯವಸ್ಥೆ ಮಾಡಬೇಕು. ಇಲ್ಲವೇ ಬಿಬಿಎಂಪಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಸೂಚಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.