ADVERTISEMENT

ಕೋವಿಡ್: ಇಳಿಕೆಯಾದ ಸಾವಿನ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 23:12 IST
Last Updated 23 ಸೆಪ್ಟೆಂಬರ್ 2020, 23:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಮರಣ ಪ್ರಕರಣಗಳು ಇಳಿಮುಖ ಕಂಡಿದ್ದು, 24 ಗಂಟೆಗಳ ಅವಧಿಯಲ್ಲಿ 38 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.

ಈ ತಿಂಗಳಲ್ಲಿ ವರದಿಯಾದ ಕನಿಷ್ಠ ಮರಣ ಪ್ರಕರಣಗಳು ಇವಾಗಿದ್ದು, ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 8,266ಕ್ಕೆ ತಲುಪಿದೆ.

ದಿನವೊಂದಕ್ಕೆ 80 ಸಾವಿರ ದಾಟಿದ್ದ ಕೋವಿಡ್‌ ಪರೀಕ್ಷೆಗಳ ಸಂಖ್ಯೆಯನ್ನು 56 ಸಾವಿರಕ್ಕೆ ಇಳಿಕೆ ಮಾಡಲಾಗಿದೆ. ಹೊಸದಾಗಿ 6,997 ಕೋವಿಡ್ ಪ್ರಕರಣಗಳು ಬುಧವಾರ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 5.40 ಲಕ್ಷಕ್ಕೆ ಏರಿಕೆಯಾಗಿದೆ. ತಿಂಗಳ ಬಹುತೇಕ ದಿನಗಳಲ್ಲಿ 8 ಸಾವಿರದ ಗಡಿ ದಾಟಿದ್ದ ಕೋವಿಡ್‌ ಪ್ರಕರಣಗಳು ಸಹ ಇಳಿಕೆ ಕಂಡಿದೆ.

ADVERTISEMENT

ಎರಡು ದಿನಗಳ ಅವಧಿಯಲ್ಲಿ 13,971 ಮಂದಿ ಮಾತ್ರ ಕೋವಿಡ್‌ ಪೀಡಿತರಾಗಿದ್ದಾರೆ.

ಸೋಂಕಿತರಲ್ಲಿ ಮತ್ತೆ 5,460 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು
ಗುಣಮುಖರಾದವರ ಸಂಖ್ಯೆ 4.37 ಲಕ್ಷಕ್ಕೆ ಏರಿಕೆಯಾಗಿದೆ. ಸದ್ಯ 94 ಸಾವಿರ ಸೋಂಕಿತರು ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 822 ರೋಗಿಗಳು ತೀವ್ರ ನಿಗಾ ಘಟದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಹೊಸದಾಗಿ 3,547 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2.04 ಲಕ್ಷ ತಲುಪಿದೆ. ಮೈಸೂರಿನಲ್ಲಿ ಮತ್ತೆ 341 ಮಂದಿ ಕೋವಿಡ್‌ ಪೀಡಿತರಾಗಿದ್ದಾರೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31 ಸಾವಿರಕ್ಕೆ ಏರಿಕೆಯಾಗಿದೆ. ಹಾಸನ (315), ಚಿಕ್ಕಮಗಳೂರು (252), ಮಂಡ್ಯ (203) ಜಿಲ್ಲೆ ಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.