ADVERTISEMENT

‘ಕ್ವಾರಂಟೈನ್ ಅವಧಿಯಲ್ಲಿ ವೇತನ ಸಹಿತ ರಜೆ’

​ಪ್ರಜಾವಾಣಿ ವಾರ್ತೆ
Published 20 ಜನವರಿ 2021, 18:35 IST
Last Updated 20 ಜನವರಿ 2021, 18:35 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ಸಂಘಟಿತ ಮತ್ತು ಅಸಂಘಟಿತ ವಲಯಗಳ ನೌಕರರು ಕೋವಿಡ್ ದೃಢಪಟ್ಟು ಕ್ವಾರಂಟೈನ್‌ನಲ್ಲಿದ್ದರೆ ಪೂರ್ಣ ಪ್ರಮಾಣದ ವೇತನ ಸಹಿತ ರಜೆ ಪಡೆಯಲು ಅರ್ಹರಾಗಿದ್ದಾರೆ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಲಾಕ್‌ಡೌನ್ ಮಾರ್ಗಸೂಚಿ ಜಾರಿಗೊಳಿಸಿದ ಅವಧಿಯಿಂದ ಈ ನಿಯಮ ಅನ್ವಯವಾಗಲಿದೆ. ಈ ಕುರಿತು ಜ.18ರಂದು ಹೊರಡಿಸಿರುವ ಆದೇಶವನ್ನು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು.

ಈ ಸಂಬಂಧ ಆಲ್‌ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ (ಎಐಟಿಯುಸಿ) ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಲೇವಾರಿ ಮಾಡಿತು.

ADVERTISEMENT

ಕೋವಿಡ್ ದೃಢಪಟ್ಟ ಕಾರ್ಮಿಕರ ಕ್ವಾರಂಟೈನ್ ಅವಧಿಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸಿ ವೇತನ ಕಡಿತಗೊಳಿಸಲಾಗುತ್ತಿದೆ ಎಂದು ಎಐಟಿಯುಸಿ ಆರೋಪಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.